ಆನೇಕಲ್ : ಬಿಎಂಟಿಸಿ ಬಸ್ಸೊಂದು ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ ಆಘಾತಕಾರಿ ಘಟನೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹುಟ್ಟೂರಾದ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ರೈಲ್ವೆ ಗೇಟ್ ಬಳಿ ನಡೆದಿದೆ.
ಆನೇಕಲ್‌ನಿಂದ ಅತ್ತಿಬೆಲೆ ಕಡೆಗೆ ಹೋಗುತ್ತಿದ್ದ ಬಸ್ಸು ರೈಲು ಹಳಿಯ ಮೇಲೆ ಸಾಗುತ್ತಿದ್ದಂತೆಯೇ ಕೆಟ್ಟು ನಿಂತಿದೆ. ನಿನ್ನೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಕಿಲೋ ಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ಅದೃಷ್ಟವಶಾತ್, ಈ ಸಮಯದಲ್ಲಿ ಯಾವುದೇ ರೈಲ್ವೆ ಪಾಸಿಂಗ್ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಇರಾನ್-ಇಸ್ರೇಲ್ ವಾರ್ | ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಕುಟುಂಬ!



















