ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಗರದ ಕೆ.ಆರ್ ಮಾರ್ಕೆಟ್ ಬಳಿ ನಡೆದಿದೆ.
ಶಬರೀಶ್ (11) ಮೃತ ಬಾಲಕ. ಕುಟುಂಬದವರ ಜೊತೆ ದ್ವಿಚಕ್ರ ವಾಹನದಲ್ಲಿ ಬಾಲಕ ಹೋಗುತ್ತಿದ್ದ ವೇಳೆ ಬಿಎಂಟಿಗೆ ಬಸ್ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದಾನೆ.
ಬಾಲಕನ ತಂದೆ ದಿಲೀಪ್ ಕುಮಾರ್ ದೇವಸ್ಥಾನವೊಂದರಲ್ಲಿ ಅರ್ಚಕರಾಗಿದ್ದಾರೆ. ಕುಟುಂಬ ಸಮೇತರಾಗಿ ಮಾರ್ಕೆಟ್‌ಗೆ ಹೊರಟಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಬಲಗಡೆಗೆ ಬಿದ್ದ ಬಾಲಕ ಸಾವಿಗೀಡಾಗಿದ್ದಾನೆ.
ಈ ಸಂಬಂಧ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನನ್ನು ವಶಕ್ಕೆ ಪಡೆಯಲಾಗಿದ್ದು, ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.