ಬೆಂಗಳೂರು : ಅಪಘಾತ ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಬಿಎಂಟಿಸಿ ಬಸ್ ನುಗ್ಗಿದ ಘಟನೆ ಬೆಂಗಳೂರಿನ ಬೃಂದಾವನ ಬಸ್ ನಿಲ್ದಾಣದ ಬಳಿ ನಡೆದಿದೆ. ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಘಟಕ 9ಕ್ಕೆ ಸೇರಿದ ಬಿಎಂಟಿಸಿ ಬಸ್ 8ನೇ ಮೈಲಿಯಿಂದ ಹೇರೋಹಳ್ಳಿ ಕ್ರಾಸ್‌ಗೆ ತೆರಳುತ್ತಿದ್ದಾಗ ಏಕಾಏಕಿ ಎದುರಿನಿಂದ ಬೈಕ್ ಬಂದಿದೆ. ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಶಿವ ದೇಗುಲಕ್ಕೆ ಬಸ್ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ ಪರಿಣಾಮ ಶಿವನ ದೇಗುಲದ ಕಾಂಪೌಂಡ್ ಹಾಗೂ ಗ್ರಿಲ್‌ಗೆ ಹಾನಿಯಾಗಿದೆ. ಅಪಘಾತದಿಂದ ಬೈಕ್ ಸವಾರನ ಬಲಗೈಗೆ ತರಚಿದ ಗಾಯಗಳಾಗಿದೆ. ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.
ಇದನ್ನೂ ಓದಿ : ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಕಂದಮ್ಮ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ!



















