ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ (BOB Recruitment 2026) ಖಾಲಿ ಇರುವ 2,418 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮ್ಯಾನೇಜರ್ ಹಾಗೂ ಆಫೀಸರ್ ಹುದ್ದೆಗಳನ್ನು ಬ್ಯಾಂಕ್ ಭರ್ತಿ ಮಾಡಿಕೊಳ್ಳುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ
ಒಟ್ಟು ಹುದ್ದೆಗಳು: 418
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಫೆಬ್ರವರಿ 19
ಉದ್ಯೋಗದ ಸ್ಥಳ: ದೇಶಾದ್ಯಂತ
ವಿದ್ಯಾರ್ಹತೆ ಏನು?
ಆಫೀಸರ್, ಮ್ಯಾನೇಜರ್ ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಸಿಎ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಎಸ್ಸಿ, ಎಸ್ಟಿ, ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 850 ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ ಆಯಾ ಹುದ್ದೆಗಳಿಗೆ ಅನುಗುಣವಾಗಿ 1.05 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bankofbaroda.bank.inಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 394 ಹುದ್ದೆ | ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್



















