ಬೆಂಗಳೂರು: ಹಣಕಾಸು ಸೇವೆಗಳಿಗೆ ಹೆಸರಾಗಿರುವ, ಬ್ಯಾಂಕ್ ಆಫ್ ಬರೋಡಾದ ಅಂಗ ಸಂಸ್ಥೆಯಾಗಿರುವ ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ನಲ್ಲಿ (BOB Capital Markets) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜರ್ ಹಾಗೂ ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್ (ಎವಿಪಿ) ಹುದ್ದೆಗಳನ್ನು ನೇಮಕಾತಿ (BOBCAPS Recruitment 2025) ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬ್ಯಾಂಕ್ ಆಫ್ ಬರೋಡಾ ಕ್ಯಾಪಿಟಲ್ ಮಾರ್ಕೆಟ್ಸ್ ನಲ್ಲಿ (BOB Capital Markets)
ಹುದ್ದೆ ಹೆಸರು: ಮ್ಯಾನೇಜರ್ ಹಾಗೂ ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್ (ಎವಿಪಿ)
ಒಟ್ಟು ಹುದ್ದೆಗಳು: ವಿವಿಧ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 30
ಉದ್ಯೋಗ ಸ್ಥಳ: ಬೆಂಗಳೂರು
ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿಯ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಿಎ ತೇರ್ಗಡೆ ಹೊಂದಿರುವ ಜತೆಗೆ ಐದು ವರ್ಷಗಳ ಕಾರ್ಯಾನುಭವ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಕೆಗೆ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ bobcaps.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂಡು, ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅರ್ಜಿ ಹಾಗೂ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು careers@bobcaps.in ವಿಳಾಸಕ್ಕೆ ನವೆಂಬರ್ ನವೆಂಬರ್ 30ರೊಳಗೆ ಮೇಲ್ ಮಾಡಬೇಕು.
ಇದನ್ನೂ ಓದಿ : ವಿದ್ಯಾರ್ಥಿನಿಯರಿಗೆ 5,500 ರೂಪಾಯಿ ಸ್ಕಾಲರ್ ಶಿಪ್ : ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ



















