ಚಿಕ್ಕಮಗಳೂರು: ಈಜಲು ಹೋಗಿ ಭದ್ರಾ ಹಿನ್ನೀರಿನಲ್ಲಿ ನಿನ್ನೆಯಷ್ಟೇ ಯುವಕನೋರ್ವ ಮೃತಪಟ್ಟ ಘಟನೆ ಮಾಸುವ ಮುನ್ನವೇ ಕಾಫಿನಾಡು ಚಿಕ್ಕಮಗಳೂರಲ್ಲಿ ಮತ್ತೊಂದು ಅವಘಡ ನಡೆದಿದೆ. ಇದೀಗ ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ.
ಕೊಪ್ಪ ತಾಲೂಕಿನ ಜಯಪುರ ಗ್ರಾಮದ ರಮೇಶ್(27), ಮಹೇಶ್ (34) ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾದ ದೂರ್ದೈವಿಗಳು. ಈಜಲು ತೆರಳಿದಾಗ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮೃತರು ಬನ್ನೂರಿನ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಕೃಷಿ ಹೊಂಡದ ಸಮೀಪ ಇವರ ಚಪ್ಪಲಿ ಪತ್ತೆಯಾಗಿದ್ದ ಹಿನ್ನೆಲೆ ನೀರಿನಲ್ಲಿ ಮುಳುಗಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷಿ ಹೊಂಡದಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಅಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಬೆಚ್ಚಿ ಬೀಳಿಸೋ ಘಟನೆ.. ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!



















