ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಜನರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಪತ್ತೆಯಾದ ಮೃತದೇಹಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ.


















