ಬೆಂಗಳೂರು: ನಗರದ ಕೆಂಗೇರಿಯ (Kengeri) ಹತ್ತಿರ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ (Bike Accident) ವೃಷಭಾವತಿ ಕಾಲುವೆಗೆ ಬಿದ್ದಿದ್ದ ಬೈಕ್ ಸವಾರನ ಶವ ಪತ್ತೆಯಾಗಿದೆ.
ಯುವಕನನ್ನು ಬ್ಯಾಟರಾಯನಪುರದ ಹೇಮಂತ್ ಎಂದು ಗುರುತಿಸಲಾಗಿದೆ. ಯುವಕ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈತ ಎಂದಿನಂತೆ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಆತನ ಬೈಕ್ ಡಿವೈಡರ್ ಗೆ ಡಿಕ್ಕಿಯಾಗಿ ರಾಜಕಾಲುವೆಗೆ ಬಿದ್ದಿದೆ. ಯುವಕ ನಾಪತ್ತೆಯಾಗುತ್ತಿದ್ದಂತೆ ಮೈಸೂರು ರಸ್ತೆಯ ಯೂನಿವರ್ಸಿಟಿ ಗೇಟ್‍ನಿಂದ ಕೆಂಗೇರಿ ಮಾರ್ಗದಲ್ಲಿ ಶೋಧ ನಡೆಸಲಾಗಿತ್ತು.
ಆತನ ಶವಕ್ಕಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 20 ಗಂಟೆಗೂ ಹೆಚ್ಚು ಕಾಲ ಹುಡುಕಾಟ ನಡೆಸಿದ್ದರು.
ಗುಂಡಿಯಿಂದಾಗಿಯೇ ಯುವಕ ಸಾವನ್ನಪ್ಪುವಂತಾಯಿತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅಪಘಾತ ಸಂಭವಿಸಿದ್ದ ಬೆನ್ನಲ್ಲಿಯೇ ಎಚ್ಚೆತ್ತಿರುವ ಬಿಬಿಎಂಪಿ (BBMP) ಫ್ಲೈ ಓವರ್ ಗಳ ಮೇಲಿನ ತಡೆಗೋಡೆ ಎತ್ತರ ಹೆಚ್ಚಿಸಲು ಮುಂದಾಗಿದೆ.