ಗಯಾನಾ ದೇಶದಲ್ಲಿ ಕೊಡಗು ಮೂಲದ ಅನಿವಾಸಿ ಭಾರತೀಯ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮದೆನಾಡು ಗ್ರಾಮದ ನಿವಾಸಿ ಪಿ.ಬಿ. ಗಿರೀಶ ಬಾಬು ಪಾಲೆ ದಕ್ಷಿಣ ಅಮೆರಿಕಾದ ಗಯಾನಾ ದೇಶದ ಶರಿಫ್ ಜನರಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಪಾಲೆ ಅವರ ಮೃತದೇಹ ಹಸ್ತಾಂತರ ಸೇರಿದಂತೆ ಆಸ್ಪತ್ರೆ ಖರ್ಚು ವೆಚ್ಚಕ್ಕಾಗಿ ರಾಜ್ಯ ಸರ್ಕಾರ 3,60,000 ರೂ. ಮಂಜೂರು ಮಾಡಿದ್ದು, ಉಳಿಕೆ ಹಣವನ್ನು ಗಿರೀಶ ಬಾಬು ಪಾಲೆ ಕೆಲಸ ಮಾಡುತ್ತಿದ್ದ ಶೆರಿಫ್ ಜನರಲ್ ಆಸ್ಪತ್ರೆ ಭರಿಸಿದೆ ಎನ್ನಲಾಗಿದೆ.
ಭಾರತೀಯ ರಾಯಭಾರಿ ಕಚೇರಿ ಹಾಗೂ ನವದೆಹಲಿಯಲ್ಲಿರುವ ನಿವಾಸಿ ಆಯುಕ್ತರು ಮೃತದೇಹವನ್ನು ಭಾರತಕ್ಕೆ ಕಳುಹಿಸಿದ್ದಾರೆ. ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಮತ್ತು ಸಿಬ್ಬಂದಿ ಮೃತದೇಹವನ್ನು ಸ್ವೀಕರಿಸಿ ಮೃತರ ಪತ್ನಿ ಜಾನಕಿ ಅವರಿಗೆ ಹಸ್ತಾಂತರಿಸಿದ್ದಾರೆ.