ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಬಳಿ ಬುಧವಾರ ಮಧ್ಯಾಹ್ನ 12:30ಕ್ಕೆ ಸಂಸದ ಬಿ.ವೈ ರಾಘವೇಂದ್ರ ಚಲಿಸುತ್ತಿದ್ದ ಇನ್ನೋವಾ ಕಾರಿಗೆ ಹಿಂಬದಿಯಿಂದ ಬೊಲೆರೊ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಸವಳಂಗ ರಸ್ತೆ ಮಾರ್ಗದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ, ಹಂಪ್ ಬಳಿ ನಿಧಾನವಾಗಿ ಚಲಿಸುತ್ತಿದ್ದ ಸಂಸದರ ಎಸ್ಕಾರ್ಟ್ ಹಾಗೂ ಇನ್ನೋವಾ ವಾಹನವು ವೇಗವನ್ನು ಎದುರಿಸಲಾಗದೇ ಬದಿಯಿಂದ ಬಂದ ಬೊಲೆರೊ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸದಿಂದ ಸಂಸದರ ವಾಹನದ ಹಿಂದಿನ ಹಾಗೂ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು, ಸಂಸದ ರಾಘವೇಂದ್ರ ಮತ್ತು ಕಾರಿನಲ್ಲಿದ್ದ ಕಚೇರಿ ಸಿಬ್ಬಂದಿ ಅನಾಹುತದಿಂದ ಪಾರುಗೊಂಡಿದ್ದಾರೆ.
ಘಟನೆಯ ಬಳಿಕ ಎರಡೂ ವಾಹನಗಳನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ಸ್ಥಳಾಂತರ ಮಾಡಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಳಿಕ ಸಂಸದ ರಾಘವೇಂದ್ರ ಪೊಲೀಸ್ ಎಸ್ಕಾರ್ಟ್ ವಾಹನದಲ್ಲಿ ಸುರಕ್ಷಿತವಾಗಿ ಶಿವಮೊಗ್ಗಕ್ಕೆ ತೆರಳಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು | ರಸ್ತೆ ಮಧ್ಯೆ ಕೆಟ್ಟು ನಿಂತ KSRTC ಬಸ್ ; ಪ್ರಯಾಣಿಕರು ಪರಿದಾಟ



















