ಚಿತ್ರದುರ್ಗ: ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲ್ಲೂಕು ಗೋನೂರು NH 48ರ ಬ್ರಿಡ್ಜ್ ಬಳಿ ನಡೆದಿದೆ.
ಮಹರಾಷ್ಟ್ರ ಮೂಲದ ರವಿ(30) ಮೃತ ಚಾಲಕ. ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ಬೊಲೆರೋ ವಾಹನವು ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ತಡೆ ಗೋಡೆಗೆ ಡಿಕ್ಕಿ ಹೊಡೆದು ಸರ್ವೀಸ್ ರಸ್ತೆಗೆ ಬಿದು ಈ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.
ಅಪಘಾತದ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ‘ಅಕ್ಷರ ಯೋಗಿ’ ಅಂಕೇಗೌಡರಿಗೆ ಒಲಿದ ಪದ್ಮಶ್ರೀ ಗೌರವ!



















