ಕಲಬುರಗಿ: ನಗರದಲ್ಲಿನ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಕರೆ ಬಂದಿದೆ.
ಇಲ್ಲಿಯ ಕರುಣೇಶ್ವರ ನಗರದಲ್ಲಿರುವ ಖಾಸಗಿ ಶಾಲೆಗೆ ಈ ರೀತಿಯ ಕರೆ ಬಂದಿದೆ. ದುಷ್ಕರ್ಮಿಗಳು ಮೇಲ್ ಮೂಲಕ ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ನೀಡಿದ್ದಾರೆ.
ಮಧ್ಯಾಹ್ನ ಒಂದು ಗಂಟೆ ವೇಳೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಸಂದೇಶ ಗಮನಿಸುತ್ತಿದ್ದಂತೆ ಶಾಲಾ ಸಿಬ್ಬಂದಿ ಮಕ್ಕಳನ್ನು (children)ಮನೆಗೆ ಕಳುಹಿಸಿದ್ದಾರೆ. ಅಶೋಕ ನಗರ ಠಾಣೆ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ಶಾಲೆಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂದೇಶ ತಮಿಳುನಾಡಿನಿಂದ ಬಂದಿದೆ ಎಂದು ಶಂಕಿಸಲಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಶಾಲೆಗೆ ಕಲಬುರಗಿ ನಗರ ಪೋಲಿಸ್ ಆಯುಕ್ತ ಡಾ.ಶರಣಪ್ಪ (Dr. Sharanappa) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ತಮಿಳುನಾಡಿನ (tamilanadu)ರಾಜಕೀಯದ ಬಗ್ಗೆ ಉಲ್ಲೇಖಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.