ಬೆಳಗಾವಿ: ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ ಬಂದಿದೆ.
ಚೆನ್ನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಮೇಲ್ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇ ಮೇಲ್ ಕುರಿತು ತನಿಖೆ ನಡೆಸುತ್ತಿದ್ದಾರೆ.
ಚೆನೈನಿಂದ ಬರುವ ವಿಮಾನಕ್ಕೆ ಬಾಂಬ್ ಇಡುವುದಾಗಿ ಬೆಳಗಾವಿ ಏರ್ಪೋರ್ಟ್ ಅಥಾರಿಟಿಗೆ ಮೇಲ್ ಬಂದಿದೆ. ಹೀಗಾಗಿ ಬೆಳಗಾವಿಗೆ ಚೆನೈನಿಂದ ವಿಮಾನ ಸಂಪರ್ಕ ಕಡಿತಗೊಳಸಲಾಗಿದೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಶಾಲೆ, ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ, ಬಹುತೇಕ ಹುಸಿಬಾಂಬ್ ಬೆದರಿಕೆಯಾಗಿವೆ. ಹೀಗಾಗಿ ಇಂತಹ ಘಟನೆಗಳು ಪೊಲೀಸರಿಗೆ ಹಾಗೂ ವಿಮಾನಯಾನ ಸಂಸ್ಥೆಗಳಿಗೆ ದೊಡ್ಡ ತಲೆನೋವಾಗಿವೆ.