ಬೆಂಗಳೂರಿನ ಕೋರಮಂಗಲ ಪಾಸ್ ಪೋರ್ಟ್ ಆಫೀಸ್ ಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ.
ಇಮೇಲ್ ಮೂಲಕ ಇಂದು ಬೆಳಗ್ಗೆ 11 ಗಂಟೆ ವೇಳೆಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಕೋರಮಂಗಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಅಲ್ಲದೇ, ಶ್ವಾನ ದಳ, ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.