ಬೆಂಗಳೂರು: ಬೆಂಗಳೂರಿನ ಹಲವು ಶಾಲೆಗೆಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಘಟನೆ ನಡೆದಿದೆ.
ಇ- ಮೇಲ್ ಮೂಲಕ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಪುಲಿಕೇಶಿನಗರ ಶಾಲೆಗಳಿಗೆ ಬಾಂಬ್ ಬೆದರಿಕೆಯ ಕರೆ ಬಂದಿವೆ. ಇ – ಮೇಲ್ ನೋಡಿದ ತಕ್ಷಣ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪುಲಿಕೇಶಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ದೂರು ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೋಷಕರು, ಶಾಲಾ ಸಿಬ್ಬಂದಿ ಹಾಗೂ ಮಕ್ಕಳಲ್ಲಿ ಆತಂಕ ಮನೆ ಮಾಡಿದೆ.