ಬೆಂಗಳೂರು: ಇಲ್ಲಿಯ ವಿವಿಧ ಶಾಲೆ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ (Bomb Threat E-Mail) ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದ್ದಾರೆ. ಆರೋಪಿ ಹನುಮಂತ ನಗರ ಮತ್ತು ವಿವಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೇಜುಗಳಿಗೆ ಇ ಮೇಲ್ ಮುಖಾಂತರ ಬಾಂಬ್ ಬೆದರಿಕೆ ಹಾಕಿದ್ದ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಪ್ರಕರಣದ ತನಿಖೆ ನಡೆಸಿ, ಆರೋಪಿಯನ್ನು ಡಾರ್ಜಲಿಂಗ್ ಜಿಲ್ಲೆಯ ಸಾಲ್ ಬರಿ ನಗರದಲ್ಲಿ ಅರೆಸ್ಟ್ ಮಾಡಿದ್ದಾರೆ.
ಆರೋಪಿಯಿಂದ ಲ್ಯಾಟ್ ಟಾಪ್ ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಕೂಡ ಆಗಿದೆ. ಆರೋಪಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಆರೋಪಿ ಪಶ್ಚಿಮ ಬಂಗಾಳದಲ್ಲಿ ಸಹ 10 ಕಡೆ ಇ-ಮೇಲ್ ಬೆದರಿಕೆ ಹಾಕಿದ್ದ ಎಂದು ಪೊಲೀಸರು ಹೇಳಿದ್ದಾರೆ.