ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಮನೆಗೆ ಇಂದು ಬಾಂಬ್ ಬೆದರಿಕೆ ಬಂದ ಹಿನ್ನೆಲೆ ತಕ್ಷಣ ಪೊಲೀಸರು ಡಿಸಿ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿರುವ ಕಿಡಿಗೇಡಿಗಳು ಜಿಲ್ಲಾಧಿಕಾರಿ ಮನೆ ಸ್ಫೋಟ ಮಾಡುವುದಾಗಿ ಬಾಂಬ್ ಬೆದರಿಕೆ ಹಾಕಿದ್ದಾರೆ. ಕೂಡಲೇ ಅಲರ್ಟ್ ಆದ ಪೊಲೀಸರು ದಾವಣಗೆರೆ ನಗರದ ರಿಂಗ್ ರೋಡ್ನ ನಿಜಲಿಂಗಪ್ಪ ಬಡಾವಣೆಯಲ್ಲಿ ಇರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸರ್ಕಾರಿ ನಿವಾಸದ ಬಳಿ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರೆದಿದೆ.
ಕಳೆದ ಒಂದು ತಿಂಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಮನೆಗೆ ಬಾಂಬ್ ಬೆದರಿಕೆ ಬಂದಿರುವುದು ಆತಂಕ ಸೃಷ್ಟಿಸಿದೆ. ಫೋನ್ ಮಾಡಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ : ಪಾಕ್ ಕ್ರಿಕೆಟ್‌ನಲ್ಲಿ ಭುಗಿಲೆದ್ದ ಭಿನ್ನಮತ | ಕೋಚ್ ವಿರುದ್ಧ PCB ಅಧ್ಯಕ್ಷರಿಗೆ ಆಟಗಾರರ ದೂರು



















