ಹೈದರಾಬಾದ್ : ಕುವೈತ್ನಿಂದ ಹೈದರಾಬಾದ್ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಯ ಇಮೇಲ್ ಸಂದೇಶ ರವಾನೆಯಾದ ಹಿನ್ನೆಲೆಯಲ್ಲಿ ವಿಮಾನವನ್ನು ಮುಂಬೈಗೆ ತಿರುಗಿಸಲಾಗಿದ್ದು, ಸುರಕ್ಷಿತವಾಗಿ ಇಳಿಸಲಾಗಿದೆ.
ವಿಮಾನ ಹೈದರಾಬಾದ್ನಲ್ಲಿ ಇಳಿದ ಬಳಿಕ ರಿಮೋಟ್ ಕಂಟ್ರೋಲ್ಡ್ ಸ್ಫೋಟಕ ಸಾಧನಗಳನ್ನು ಬಳಸಿಕೊಂಡು ದಾಳಿ ನಡೆಸುತ್ತೇವೆ ಎಂಬ ಬೆದರಿಕೆ ಸಂದೇಶ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಈ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಮುಂಬೈನಲ್ಲಿ ಲ್ಯಾಂಡ್ ಮಾಡಲಾಗಿದೆ.
ಇಂಡಿಗೋ 6E1234 ವಿಮಾನದಲ್ಲಿ 228 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಇದ್ದರು. ಬೆಳಗ್ಗೆ ಸುಮಾರು 6.30ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಬೆದರಿಕೆ ಇಮೇಲ್ ಬಂದ ನಂತರ, ಅಧಿಕಾರಿಗಳು ವಿಮಾನವನ್ನು ಮುಂಬೈಗೆ ತಿರುಗಿಸಲು ನಿರ್ಧರಿಸಿದರು. ಅಲ್ಲಿ ವಿಮಾನ ಸುರಕ್ಷಿತವಾಗಿ ಇಳಿದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನ ಲ್ಯಾಂಡ್ ಆದ ಬಳಿಕ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಿ, ಅಜ್ಞಾತ ಸ್ಥಳದಲ್ಲಿ ಭದ್ರತಾ ತಪಾಸಣೆ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳಗಳು ಸೇರಿದಂತೆ ಸಂಪೂರ್ಣ ಭದ್ರತಾ ತಂಡ ಪರಿಶೀಲನೆ ನಡೆಸಿದೆ. ಈ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬೆದರಿಕೆ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಲಾಗುತ್ತಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರೋಡ್ ರೇಜ್ ಗಲಾಟೆಯಲ್ಲಿ ಮಧ್ಯಪ್ರವೇಶಿಸಿ ದಾಂಧಲೆ | ರೌಡಿಶೀಟರ್ ಸೇರಿ ಇಬ್ಬರು ಅರೆಸ್ಟ್


















