ಬೆಂಗಳೂರು : ಟೇಕಾಫ್ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ ಕಂಡು ಬಂದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.
ಗುರುವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳುತ್ತಿದ್ದ 6E-6423 ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಕಂಡು ಬಂದಿದೆ. ‘Dont go Bomb hi please’ ಅಂತ ಪೇಪರ್ನಲ್ಲಿ ಬರೆದು ವಿಮಾನದ ಕ್ರೀವ್ ಲ್ಯಾವೆಟರಿನಲ್ಲಿ ಇಟ್ಟಿರುವುದು ಪತ್ತೆಯಾಗಿದೆ.
ಬಾಂಬ್ ಬೆದರಿಕೆಯ ಸಂದೇಶ ಕಂಡು ಬಂದ ಹಿನ್ನೆಲೆ ತಕ್ಷಣವೇ ಪ್ರಯಾಣಿಕರನ್ನ ಕೆಳಗಡೆ ಇಳಿಸಿದ ಭದ್ರತಾ ಸಿಬ್ಬಂದಿ ವಿಮಾನವನ್ನ ತಪಾಸಣೆ ನಡೆಸಿದ್ದಾರೆ. ಈ ವೇಳೆ, ಯಾವುದೇ ಬಾಂಬ್ ಪತ್ತೆಯಾಗ ಹಿನ್ನೆಲೆ ಇದೊಂದು ಹುಸಿ ಬಾಂಬ್ ಸಂದೇಶ ಎಂದು ದೃಢಪಟ್ಟಿದೆ.
ಬಾಂಬ್ ಬೆದರಿಕೆ ಪತ್ರ ಬರೆದಿಟ್ಟವನ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಇಂಡಿಗೋ ಸಂಸ್ಥೆಯಿಂದ ದೂರು ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಸಚಿವಾಲಯದಲ್ಲಿ ನೀರು-ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಆದೇಶ ; ಹೊಸ ನಿಯಮ ಜಾರಿ!


















