ಮಂಗಳೂರು: ಬಾಲಕನೋರ್ವ ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಗಳೂರಿನ (Mangaluru) ಮೇರಿಹಿಲ್‍ನ ಮಾತಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ (Apartment) ಈ ದುರ್ಘಟನೆ ಸಂಭವಿಸಿದೆ. ಸುದೇಶ್ ಭಂಡಾರಿ ಎಂಬವರ ಪುತ್ರ ಸಮರ್ಜಿತ್(13) ಸಾವನ್ನಪ್ಪಿರುವ ಬಾಲಕ ಎನ್ನಲಾಗಿದೆ.
ಬಾಲಕ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.