ಬಳ್ಳಾರಿ: ಕುರಿ ಮೇಯಿಸಲು ಹೋಗಿದ್ದ ಬಾಲಕ ಕೃಷಿ ಹೊಂಡದಲ್ಲಿ (Agricultural Pit) ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಿರುಗುಪ್ಪ (Siruguppa) ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ನಡೆದಿದೆ. ವೀರೇಶ್ (13) ಸಾವನ್ನಪ್ಪಿರುವ ದುರ್ದೈವಿ. ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಕೃಷಿ ಹೊಂಡದಿಂದ ಮೃತದೇಹ ಹೊರ ತೆಗೆಯಲಾಗಿದೆ. ಘಟನೆ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.