ಬೆಂಗಳೂರು; ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದು ಬಾಲಕ ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಸೋಲದೇವನಹಳ್ಳಿಯ ಕುಂಬಾರಹಳ್ಳಿ ವಿನಾಯಕ ಲೇಔಟ್ ನಲ್ಲಿ ನಡೆದಿದೆ.
14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ. ನಾಗಪ್ರಸಾದ್ (50) ಕೊಲೆಗೈದ ವ್ಯಕ್ತಿಯೆಂದು ತಿಳಿದು ಬಂದಿದೆ.
ನಾಗಪ್ರಸಾದ್ ಅಕ್ಕ ಶಿಲ್ಪಾ ಎಂಬಾಕೆ ಮಗನಾಗಿದ್ದ ಬಾಲಕ ಅಮೋಘ ಕೀರ್ತಿ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಬಾಲಕ ಮೊಬೈಲ್ ನಲ್ಲಿ ಫ್ರೀ ಫೈಯರ್ ಗೇಮ್ ಗೆ ಅಡಿಕ್ಟ್ ಆಗಿ ಹಣಕ್ಕಾಗಿ ಮಾವನ ಬಳಿ ಪೀಡಿಸುತ್ತಿದ್ದ. ಇದರಿಂದ ಮನನೊಂದಿರುವ ನಾಗಪ್ರಸಾದ್ ಸೋಮವಾರ ಬೆಳಗಿನ ಜಾವ 4:30ರ ಸಮಯದಲ್ಲಿ ಬಾಲಕನ ಕತ್ತು ಸೀಳಿ ಕೊಲೆ ಮಾಡಿ ನಂತರ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆದರೆ ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್ ನಲ್ಲಿ ಮೂರು ದಿನ ಕಾಲ ಕಳೆದಿದ್ದ. ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದಾನೆ. ಘಟನೆಗೆ ಸಂಬಂದಿಸಿದಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.



















