ವಿದ್ಯುತ್ ಹೈಟೆನ್ಷನ್ ತಂತಿಯಿಂದ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಾಯಾಳು ಬಾಲಕ ಅನಂತ್(10) ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಅನಂತ್ ಎಂಬುವವರ ಕುಟುಂಬ ನೇಪಾಳದಿಂದ ಬಂದು ನೆಲೆಸಿತ್ತು. ಜೂನ್ 15 ರಂದು ಮನೆಯಲ್ಲಿದ್ದ ವೇಳೆ ಪೊರಕೆ ಎಸೆಯುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಕೂಡಲೇ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆ.ಆರ್. ಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.