ಬೆಂಗಳೂರು : ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ಬಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಕಲ್ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿಕಾಸ್‌ನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು | ಕೆನಡಾ ಮೂಲದ ಮಹಿಳೆಗೆ ಮಸಾಜ್ ಮಾಡುವ ವೇಳೆ ಲೈಂಗಿಕ ಕಿರುಕುಳ



















