ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ, ದೇಶದ ಪ್ರಮುಖ ತೈಲ ಕಂಪನಿಯಾಗಿರುವ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (BPCL Recruitment 2026) ಖಾಲಿ ಇರುವ 55 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಟೀಮ್ ಲೀಡ್, ಟೆಕ್ನಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು: ಟೀಮ್ ಲೀಡ್, ಟೆಕ್ನಿಕಲ್ ಆಫೀಸರ್
ಒಟ್ಟು ಹುದ್ದೆಗಳು: 55
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 20
ಟೀಮ್ ಲೀಡ್, ಟೆಕ್ನಿಕಲ್ ಆಫೀಸರ್, ಸೈಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಎಂಬಿಎ, ಎಂಎಸ್ಸಿ, ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿಯಿಂದ 2.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ bharatpetroleum.com ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಮೇಲೆ ಕ್ಲಿಕ್ ಮಾಡಬೇಕು
ಆನ್ ಲೈನ್ ನಲ್ಲೇ ಅರ್ಜಿಯನ್ನು ಭರ್ತಿ ಮಾಡಬೇಕು
ಅರ್ಜಿ ಹಾಗೂ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ



















