ಬೆಂಗಳೂರು: ರಾಜ್ಯದಲ್ಲಿನ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಎದುರಾಗಿದೆ.
ಅನರ್ಹ ಬಿಪಿಎಲ್ ಕಾರ್ಡ್ (BPL Card) ಪಡಿತರದಾರರನ್ನು ಕೈ ಬಿಡುವ ಕುರಿತು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ (Department of Food Civil Supplies) ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನರ್ಹ ಬಿಪಿಎಲ್ ಪಡಿತರದಾರರನ್ನು ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಅನರ್ಹ ಬಿಪಿಎಲ್ ಪಡಿತರದಾರರು ಸ್ವಯಂ ತಮ್ಮ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಆನಂತರ ನೊಟೀಸ್ ನೀಡಿ ಕಾರ್ಡ್‌ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು 1,53,69,945 ಪಡಿತರ ಚೀಟಿಗಳಲ್ಲಿ 5,30,88,636 ಸದಸ್ಯರು ಫಲಾನುಭವಿಗಳಿದ್ದಾರೆ. ಈಗಾಗಲೇ 4 ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ.