ತುಮಕೂರು: ಇಲ್ಲಿನ ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ನಡೆಯಿತು.
ಸಾವಿರಾರು ಭಕ್ತರ ಸಮ್ಮುಖದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ಸಿಕ್ಕಿತ್ತು. ಬ್ರಹ್ಮರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ಚಾಲನೆ ನೀಡಿದರು.
ಜಾತ್ರೆಯ ಹಿನ್ನೆಲೆಯಲ್ಲಿ ರಥೋತ್ಸವವನ್ನು ವಿವಿಧ ಹೂಗಳಿಂದ ಅಲಂಕಾರಗೊಳಿಸಲಾಗಿತ್ತು. ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂ ಸಿಇಓ ಪ್ರಭು, ಎಸ್ಪಿ ಅಶೋಕ್, ಮಹಾನಗರ ಪಾಲಿಕೆ ಕಮಿಷನರ್ ಬಿ.ವಿ ಅಶ್ವಿಜಾ, ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಜಾತ್ರಾ ಮಹೋತ್ಸವಕ್ಕೆ ಜನಸಾಗರವೇ ಹರಿದು ಬಂದಿತ್ತು. ಭಕ್ತಿ-ಭಾವದಿಂದ ಜನರು ರಥ ಎಳೆದರು.