ಬೆಂಗಳೂರು : ಪ್ರಯಾಣಿಕರಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಕಂದಕಕ್ಕೆ ನುಗ್ಗಿರುವ ಘಟನೆ ನಡೆದಿದೆ.
ಬೆಂಗಳೂರು ಹೊರವಲಯದ ಜಿಗಣಿ-ಬನ್ನೇರುಘಟ್ಟ ಮುಖ್ಯ ರಸ್ತೆಯ ಹರಪ್ಪನಹಳ್ಳಿ ಬಳಿ ಘಟನೆ ನಡೆದಿದೆ.
ಬಸ್ ಚಲಿಸುತ್ತಿರುವಾಗಲೇ ಏಕಾಏಕಿ ಬ್ರೇಕ್ ಫೇಲ್ ಆಗಿದ್ದು, ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಂದಕಕ್ಕೆ ನುಗ್ಗಿದೆ. ಸದ್ಯ ಅಪಘಾತದಲ್ಲಿ ಪ್ರಯಾಣಿಕರು ಸುರಕ್ಷಿತರಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಜಿಗಣಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ಇದಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



















