ಬೆಂಗಳೂರು : ಬೆಂಗಳೂರಲ್ಲಿ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿ ಹಾಗೂ ಮಠದ ಭಕ್ತರ ನಡುವೆ ಗಲಾಟೆ ನಡೆದಿರುವ ಘಟನೆ ಬಸವನಗುಡಿ ವ್ಯಾಪ್ತಿಯಲ್ಲಿ ನಡೆದಿದೆ.
ಕಾಲೇಜಿಗೆ ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯೊಬ್ಬ ಪುತ್ತಿಗೆ ಮಠದ ಮುಂದೆ ವಾಹನವನ್ನು ಪಾರ್ಕ್ ಮಾಡಿದ್ದನು. ಈ ವೇಳೆ ಮಠದ ಭಕ್ತರೊಬ್ಬರು ಇಲ್ಲಿ ಪಾರ್ಕಿಂಗ್ ಮಾಡಬಾರದು ಎಂದು ತಿಳಿಸಿದ್ದರು. ಇದರಿಂದ ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ವಾಗ್ವಾದ ಉಂಟಾಗಿ, ನಂತರ ಗಲಾಟೆಗೆ ತಿರುಗಿದೆ.
ಈ ಘರ್ಷಣೆಯಲ್ಲಿ ವಿದ್ಯಾರ್ಥಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆ ನಂತರ ಇಬ್ಬರೂ ಬಸವನಗುಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮುಂದಾದರು.
ಪೊಲೀಸರು ವಿದ್ಯಾರ್ಥಿಯ ಪೋಷಕರನ್ನು ಠಾಣೆಗೆ ಕರೆಸಿ ಪರಿಸ್ಥಿತಿಯನ್ನು ಸಮಾಧಾನಪಡಿಸಿದರು. ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ದೂರುದಾರರ ಜೊತೆ ಮಾತುಕತೆ ನಡೆಸಿ ರಾಜಿ ಮಾಡಲಾಗಿದೆ. ಈ ಪ್ರಕರಣ ಸಂಬಂಧ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಕೆಲಸದಿಂದ ತೆಗೆದ ಮ್ಯಾನೇಜರ್‌ನ ಚಾಕುವಿನಿಂದ ಇರಿದು ಕೊಲೆ!


















