ಬೆಂಗಳೂರು: ನೀವು ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಅಂಗಸಂಸ್ಥೆಯಾಗಿರುವ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 88 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
BRBNMPLನಲ್ಲಿ ಖಾಲಿ ಇರುವ ಡೆಪ್ಯೂಟಿ ಮ್ಯಾನೇಜರ್, ಪ್ರೊಸೆಸ್ ಅಸಿಸ್ಟಂಟ್ ಗ್ರೇಡ್-1 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಗಸ್ಟ್ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ವಿಧಿಸಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್ ಮುದ್ರಣ ಪ್ರೈವೇಟ್ ಲಿಮಿಟೆಡ್
ಒಟ್ಟು ಹುದ್ದೆ: 88
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 31
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ, ಪಶ್ಚಿಮ ಬಂಗಾಳ
ಅರ್ಜಿ ಸಲ್ಲಿಸುವುದು ಹೇಗೆ?
- ಅಭ್ಯರ್ಥಿಗಳು ಮೊದಲಿಗೆ brbnmpl.co.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
- ಆಯಾ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
- ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
- ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಬ್ ಮಿಟ್ ಮಾಡಬೇಕು