ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನ ಅಂಗಸಂಸ್ಥೆಯಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL Recruitment 2025)ನಲ್ಲಿ ಖಾಲಿ ಇರುವ 88 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಡೆಪ್ಯುಟಿ ಮ್ಯಾನೇಜರ್ ಹಾಗೂ ಪ್ರೊಸೆಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ (BRBNMPL)
ಒಟ್ಟು ಹುದ್ದೆಗಳು: 88
ಹುದ್ದೆಗಳ ಹೆಸರು: ಡೆಪ್ಯುಟಿ ಮ್ಯಾನೇಜರ್ ಹಾಗೂ ಪ್ರೊಸೆಸ್ ಅಸಿಸ್ಟಂಟ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 29
ಕರ್ನಾಟಕ ಹಾಗೂ ಪಶ್ಚಿಮ ಬಂಗಾಳದಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಡೆಪ್ಯುಟಿ ಮ್ಯಾನೇಜರ್ ವಿಭಾಗದಲ್ಲಿ 24 ಹಾಗೂ ಪ್ರೊಸೆಸ್ ಅಸಿಸ್ಟಂಟ್ ವಿಭಾಗದಲ್ಲಿ 64 ಹುದ್ದೆಗಳು ಖಾಲಿ ಇವೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 24 ಸಾವಿರ ರೂಪಾಯಿಯಿಂದ 88,638 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ, ಬಿ.ಇ, ಬಿ.ಟೆಕ್, ಪಿಜಿ ಡಿಪ್ಲೋಮಾ, ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 18-31 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕರು, ಮಹಿಳೆಯರಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 400 ರೂಪಾಯಿ ಅರ್ಜಿ ಶುಲ್ಕವಿದೆ. ಅಭ್ಯರ್ಥಿಗಳು brbnmpl.co.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.



















