ಬೆಂಗಳೂರು: ರಾಜ್ಯ ‘ಕೈ’ ಮನೆಯಲ್ಲಿ ಅಧಿಕಾರ ಹಂಚಿಕೆಯ ಜಟಾಪಟಿಯ ನಡುವೆ ಹೈಕಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಉಪಹಾರ ಕೂಟವನ್ನು ಆಯೋಜಿಸಲಾಗಿತ್ತು, ನಾವಿಬ್ಬರು ಒಂದಾಗಿದ್ದೇವೆ, ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಒಗ್ಗಟ್ಟಿನ ಸಂದೇಶ ನೀಡಿದ್ದರು. ಹಾಗೆಯೇ ಇಂದು ಡಿಸಿಎಂ ನಿವಾಸದಲ್ಲಿ ಸಿಎಂಗಾಗಿ ಬೆಳಗ್ಗೆ 9:30ಕ್ಕೆ ಬ್ರೇಕ್‌ಫಾಸ್ಟ್ ಆಯೋಜಿಸಿದ್ದಾರೆ. ಸಿದ್ದರಾಮಯ್ಯಗೆ ಇಷ್ಟವಾದ ನಾಟಿ ಕೋಳಿ ರೆಸಿಪಿಯನ್ನೇ ರೆಡಿ ಮಾಡಿಸಲಾಗುತ್ತಿದೆಯಂತೆ.
ನಾನು ಮತ್ತು ಮುಖ್ಯಮಂತ್ರಿಗಳು ಒಟ್ಟಾಗಿ, ಒಂದು ತಂಡವಾಗಿ ಕೆಲಸ ಮಾಡುತ್ತೇವೆ. ಅದನ್ನು ಮುಂದುವರಿಸುತ್ತೇವೆ. ಕರ್ನಾಟಕಕ್ಕೆ ನಾವು ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ, ನಮ್ಮ ಸಾಮೂಹಿಕ ಪ್ರಯತ್ನಗಳ ಬಲ ಹೆಚ್ಚಿಸುವ ಕುರಿತು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಉಪಾಹಾರಕ್ಕೆ ಆಹ್ವಾನಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಸೋಮವಾರ ತಿಳಿಸಿದ್ದರು.
ಸಿಎಂ ಹಾಗೂ ಡಿಸಿಎಂ ನಡುವಣ ಈ ಸಭೆಗಳು ಗೊಂದಲ ಬಗೆಹರಿಯುತ್ತಿರುವುದರ ಮುನ್ಸೂಚನೆ ಎಂದು ಕಾಂಗ್ರೆಸ್ ಪಡೆ ನಂಬಿದೆ. ಹೀಗಾಗಿ ಮಾಜಿ ಸಂಸದ ಡಿಕೆ ಸುರೇಶ್, ಎಲ್ಲ ಸಸೂತ್ರವಾಗಿ ನಡೀತಿದೆ. ಬ್ರೇಕ್‌ಫಾಸ್ಟ್ ಆಗುತ್ತಿದೆ ಎಂದಿದ್ದಾರೆ. ಮತ್ತೊಂದೆಡೆ ಸಚಿವ ದಿನೇಶ್ ಗುಂಡೂರಾವ್, ಇದು ರಾಜಕೀಯಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ನಾಯಕರ ಈ ಬ್ರೇಕ್‌ಫಾಸ್ಟ್ ಮೀಟಿಂಗ್ ವಿಪಕ್ಷಗಳಿಗೆ ಅಸ್ತ್ರವಾಗಿ ಸಿಕ್ಕಿದೆ. ಮಾಜಿ ಸಚಿವ ಶ್ರೀರಾಮುಲು, ಕೈ ದಿಗ್ಗಜರ ನಡುವಿನ ಸಂಧಾನವನ್ನು ರಷ್ಯಾ-ಉಕ್ರೇನ್ ಕದನ ವಿರಾಮಕ್ಕೆ ಹೋಲಿಸಿದ್ದಾರೆ. ಯಾರು? ಯಾವಾಗ ಬಾಂಬ್ ಹಾಕುತ್ತಾರೊ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ. ದೇವರಾಜ್ ಹೃದಯಾಘಾತದಿಂದ ನಿಧನ



















