ಚಿಕ್ಕಮಗಳೂರು: ಮಲೆನಾಡು, ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಭಾರೀ ಮಳೆಗೆ ಕೊಪ್ಪ ತಾಲೂಕಿನ ಹುಲ್ಲಿನಗದ್ದೆ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಮುಳುಗಡೆಯಾಗಿ ಜನರು ಪರದಾಟ ನಡೆಸುವಂತಾಗಿದೆ. ಕೊಗ್ರೆಯಿಂದ ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಹುಲ್ಲಿನಗದ್ದೆ ಸಂಪೂರ್ಣ ಜಲಾವೃತಗೊಂಡಿದೆ. ಧಾರಾಕಾರ ಮಳೆಗೆ ಮಲೆನಾಡಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.


















