ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ.
ಕೃಷ್ಣಾ ನದಿಗೆ 54 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 6 ಕೆಳ ಹಂತದ ಸೇತುವೆಗಳು ಮತ್ತೆ ಮುಳುಗಡೆಯಾಗಿವೆ. 12 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ 6 ಕೆಳ ಹಂತದ ಸೇತುವೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಲ್ಲಿಕವಾಡ-ದತ್ತವಾಡ, ವೇದಗಂಗಾ ನದಿಯ ಬಾರವಾಡ-ಕುನ್ನೂರು, ಭೋಜ್-ಕಾರದಗಾ, ಭೋಜವಾಡಿ – ಕುನ್ನೂರು, ಕೃಷ್ಣಾ ನದಿಗೆ ಅಡ್ಡಲಾಗಿರುವ ಯಡೂರು-ಕಲ್ಲೋಳ, ಬಾವನಸೌಂದತ್ತಿ – ಮಾಂಜರಿ ಸೇತುವೆಗಳು ಜಲಾವೃತವಾಗಿವೆ. ಹೀಗಾಗಿ ಪರ್ಯಾಯ ಮಾರ್ಗಗಳ ಮೂಲಕ ಜನರು ಸಂಚಾರ ನಡೆಸುತ್ತಿದ್ದಾರೆ.