ಬೆಂಗಳೂರು : ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಸಿಲಿಂಡರ್ ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಹಲವು ಹೋಟೆಲ್‌ಗಳು ಸಂಕಷ್ಟಕ್ಕೆ ಸಿಲುಕಿವೆ. ಅಡುಗೆ ಕಾರ್ಯ ನಿರ್ವಹಿಸಲು ಗ್ಯಾಸ್ ಅವಶ್ಯಕವಾಗಿದ್ದು, ಸರಬರಾಜು ಕಡಿಮೆಯಾಗಿರುವುದರಿಂದ ಹೋಟೆಲ್‌ಗಳು ಕಾರ್ಯಾಚರಣೆ ಮುಂದುವರಿಸುವುದು ಕಷ್ಟವಾಗುತ್ತಿದೆ.
ಈ ಮಧ್ಯೆ ಹೊಸೂರಿನ ಹೋಟೆಲ್ ಒಂದು ವಿಭಿನ್ನ ಹಾಗೂ ಗಮನಸೆಳೆಯುವ ಆಫರ್ ಘೋಷಿಸಿದೆ. ‘Help Us Cook, We’ll Feed You’ ಎಂಬ ಅಭಿಯಾನವನ್ನು ಆರಂಭಿಸಿರುವ ಈ ಹೋಟೆಲ್, ಗ್ರಾಹಕರ ಸಹಕಾರ ಪಡೆಯಲು ಹೊಸ ರೀತಿಯ ಪ್ರಯತ್ನಕ್ಕೆ ಮುಂದಾಗಿದೆ. ಗ್ಯಾಸ್‌ಗಾಗಿ ಹೋಟೆಲ್ ಮಾಲೀಕರು ಗ್ರಾಹಕರಿಗೆ ಬಿರಿಯಾನಿ ಆಫರ್ ಕೊಟ್ಟಿದ್ದಾರೆ.
ತಮಿಳುನಾಡಿನ ಹೊಸೂರು ಬಳಿಯ ‘ಈರೋಡ್ ಅಮ್ಮಾಯ್ ಮೆಸ್’ ಈ ಬಿರಿಯಾನಿ ಆಫರ್ ನೀಡಿದೆ. ಗ್ಯಾಸ್ ಕೊರತೆಯಿಂದ ಅಡುಗೆ ಕಾರ್ಯದಲ್ಲಿ ತೊಂದರೆ ಎದುರಿಸುತ್ತಿರುವ ಹೋಟೆಲ್, ಗ್ರಾಹಕರಿಂದಲೇ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ತರಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.

ಹೋಟೆಲ್‌ನಲ್ಲಿ ವಿಶೇಷ ಆಫರ್
1 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ತಂದರೆ – ಒಂದು ತಿಂಗಳು ಪ್ರತಿದಿನ 1 ಬಿರಿಯಾನಿ ಉಚಿತ
2 ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ತಂದರೆ – ಒಂದು ತಿಂಗಳು ಪ್ರತಿದಿನ 2 ಬಿರಿಯಾನಿ ಉಚಿತ
ಗ್ಯಾಸ್ ಅಭಾವ ಹಿನ್ನೆಲೆ ಗ್ಯಾಸ್ ಹೊಂದಿಸಲು ಹೋಟೆಲ್ ಉದ್ಯಮಿಗಳು ನಾನಾ ರೀತಿಯ ಸರ್ಕಸ್ ಗಿಳಿದಿದ್ದಾರೆ. ಇದೀಗ ತಮಿಳುನಾಡಿನ ಹೊಸೂರು ಹೋಟೆಲ್ ಮಾಲೀಕನ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?



















