ರಾಯಚೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಳ್ಳದಲ್ಲಿ ಟ್ರ್ಯಾಕ್ಟರ್ ಸಿಲುಕಿ ಪ್ರಯಾಣಿಕರು ಪರದಾಟ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಮಸ್ಕಿ ತಾಲ್ಲೂಕಿನ ಚಿಕ್ಕ ಉದ್ಬಾಳ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಬಳಗಾನೂರು ಗ್ರಾಮದಿಂದ ಚಿಕ್ಕ ಉದ್ಬಾಳದಲ್ಲಿ ನಡೆಯುತ್ತಿದ್ದ ಜಾತ್ರೆಗೆಂದು ಟ್ರ್ಯಾಕ್ಟರ್ ಹೊರಟಿತ್ತು. ಆ ವೇಳೆ ಹಳ್ಳದ ನೀರಿನಲ್ಲಿ ಟ್ರ್ಯಾಕ್ಟರ್ ಸಿಲುಕಿಕೊಂಡಿದೆ. ಆಗ ಇಳಿಯುವಾಗ ಬಾಲಕನೋರ್ವ ಕೈ ಬೆರಳು ಮುರಿದುಕೊಂಡಿದ್ದಾನೆ.



















