ಗದಗ: ಯುವತಿಯೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪದ ಮೇಲೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ನಗರದ ಮುಳಗುಂದ ನಾಕಾದಲ್ಲಿ ನಡೆದಿದೆ.
ಹರ್ತಿ ಗ್ರಾಮದ ನವೀನ್ ಥಳಿತಗೊಳಗಾದ ಯುವಕ. ಬೆಟಗೇರಿ ಮೂಲದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪದ ಹಿನ್ನೆಲೆಯುವತಿ ಹಾಗೂ ಆಕೆಯ ಸಹೋದರರು ಯುವಕನನ್ನು ನಡು ರಸ್ತೆಯಲ್ಲೇ ಹಿಡಿದು ಮನಬಂದಂತೆ ಥಳಿಸಿದ್ದಾರೆ.
ಬ್ಯಾಟರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಅಂಗಡಿಯಿಂದ ಹೊರಗೆ ಕರೆತಂದು ಸಾರ್ವಜನಿಕ ಪ್ರದೇಶದಲ್ಲಿ ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿದರು ಕೂಡ, ಅವರ ಸಮ್ಮುಖದಲ್ಲಿಯೇ ಯುವತಿ ಹಾಗೂ ಆಕೆಯ ಸಹೋದರರು ಯುವಕನಿಗೆ ಗೂಸಾ ನೀಡಿದ್ದಾರೆ. ಬಳಿಕ ಯುವಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಸದ್ಯ ಈ ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಇಂದೋರ್ ಮಾದರಿಯ ಘಟನೆ | ಕುಡಿಯುವ ನೀರಿಗೆ ಚರಂಡಿ ನೀರು ಮಿಕ್ಸ್ ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ



















