ಬೆಂಗಳೂರು: ದೇಶದ ಸೇನೆಯಲ್ಲಿ ಕೆಲಸ ಮಾಡುವ ಮೂಲಕ ದೇಶ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ (BSF Recruitment 2025) ಖಾಲಿ ಇರುವ 1,121 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸೆಪ್ಟೆಂಬರ್ 23 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಗಸ್ಟ್ 24ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಗಡಿ ಭದ್ರತಾ ಪಡೆ (BSF)
ಹುದ್ದೆಗಳ ಹೆಸರು: ಹೆಡ್ ಕಾನ್ ಸ್ಟೆಬಲ್
ಒಟ್ಟು ಹುದ್ದೆಗಳು: 1,121
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 23
ದೇಶದ ಯಾವುದೇ ಭಾಗದಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯಸ್ಸಿನವರಾಗಿರಬೇಕು. ಯುಆರ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮಹಿಳೆಯರು, ಎಸ್ ಸಿ, ಎಸ್ ಟಿ ಸಮುದಾಯದವರಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿ, ಇಡಬ್ಲ್ಯೂಎಸ್, ಜನರಲ್ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25,500 ರೂ.ನಿಂದ 81,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ದೈಹಿಕ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಸುವ ಅಭ್ಯರ್ಥಿಗಳು https://rectt.bsf.gov.in/ ಗೆ ಭೇಟಿ ನೀಡಬಹುದು.