ಬೆಂಗಳೂರು: ದೇಶದ ಸೇನೆಯಲ್ಲಿ ಕೆಲಸ ಮಾಡಬೇಕು, ದೇಶದ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ (BSF Recruitment 2025) 391 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಹೆಣ್ಣುಮಕ್ಕಳಿಗೂ ಹುದ್ದೆಗಳನ್ನು ಮೀಸಲಿಡಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
“ಹುದ್ದೆಗಳ ಸಂಕ್ಷಿಪ್ತ ವಿವರ”
ನೇಮಕಾತಿ ಸಂಸ್ಥೆ: ಗಡಿ ಭದ್ರತಾ ಪಡೆ (BSF)
ಒಟ್ಟು ಹುದ್ದೆಗಳು: 391
ಹುದ್ದೆಗಳ ಹೆಸರು: ಕಾನ್ ಸ್ಟೆಬಲ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 4
ಜನರಲ್ ಡ್ಯೂಟಿ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಕಾನ್ ಸ್ಟೆಬಲ್ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪುರುಷರಿಗೆ 197 ಹಾಗೂ ಸ್ತ್ರೀಯರಿಗೆ 194 ಹುದ್ದೆಗಳನ್ನು ಮೀಸಲಿಡಲಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 18ರಿಂದ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಹೆಣ್ಣುಮಕ್ಕಳು, ಎಸ್ಸಿ, ಎಸ್ಟಿಯವರಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಉಳಿದವರಿಗೆ 159 ರೂಪಾಯಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ದಾಖಲೆ ಪರಿಶೀಲನೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಮೆರಿಟ್ ಲಿಸ್ಟ್ ಹಾಗೂ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಲು rectt.bsf.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.