ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ ನಿಗಮ ಲಿಮಿಟೆಡ್‌ನಲ್ಲಿ ಖಾಲಿ ಇರುವ 120 ಹುದ್ದೆಗಳ (BSNL Recruitment 2026) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದುವರೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನಾಂಕವಾಗಿತ್ತು. ಈಗ ಇದನ್ನು ಏಪ್ರಿಲ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬಿಎಸ್ಸೆನ್ನೆಲ್ ನೀಡುತ್ತಿರುವ ಮೂರನೇ ಅವಕಾಶ ಇದಾಗಿದೆ. ಇದುವರೆಗೆ ಎರಡು ಬಾರಿ ದಿನಾಂಕ ವಿಸ್ತರಣೆ ಮಾಡಲಾಗಿತ್ತು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)
ಒಟ್ಟು ಹುದ್ದೆಗಳು: 120
ಹುದ್ದೆಗಳ ಹೆಸರು: ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 30
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಸಿಎಂಎ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಇಡಬ್ಲ್ಯೂಎಸ್, ಒಬಿಸಿಯವರಿಗೆ 2,500 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 1,250 ರೂಪಾಯಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ bsnl.co.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ : ನೌಕರರ ವಿಮಾ ನಿಗಮದಲ್ಲಿ 48 ಹುದ್ದೆಗಳ ನೇಮಕಾತಿ : 1.4 ಲಕ್ಷ ರೂ. ಭರ್ಜರಿ ಸಂಬಳ!



















