ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ 15 ಹುದ್ದೆಗಳ (BSNL Recruitment 2026) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಸಂಚಾರ ನಿಗಮ ಲಿಮಿಟೆಡ್ (BSNL)
ಒಟ್ಟು ಹುದ್ದೆಗಳು: 15
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 24
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಸಿಎಂಎ, ಎಂಬಿಎ, ಸ್ನಾತಕೋತ್ತರ ಪದವಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಎಲ್ಲ ಸಮುದಾಯದವರಿಗೆ 1,000 ರೂಪಾಯಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.25 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಗ್ರೂಪ್ ಡಿಸ್ಕಷನ್ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆ ತಿಳಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ bsnl.co.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಇದನ್ನೂ ಓದಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ಅಬ್ಬರಿಸಿದ ರಿಷಭ್ ಪಂತ್ : 50ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ!



















