ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆಯಿಂದಾಗಿ ದೊಡ್ಡ ಅವಘಡವೊಂದು ನಡೆದಿದೆ.
ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಭಯಾನಕ ಘಟನೆ ನಡೆದಿದೆ. ಅಲ್ಲದೇ, ಈ ಕಟ್ಟಡದ ಅವಶೇಷಗಳಡಿ 16 ಜನ ಕಾರ್ಮಿಕರು ಸಿಲುಕಿರಬಹುದು ಎಂಬ ಮಾಹಿತಿ ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನಷ್ಟೇ ಸಂಪೂರ್ಣ ಮಾಹಿತಿ ಸಿಗಬೇಕಿದೆ.