ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇದ್ದು, ಅವರ ಮನೆಯ ಕಿಟಕಿ ಗಾಜುಗಳನ್ನು ಬುಲೆಟ್ ಪ್ರೂಫ್ ಹಾಕಿಸಲಾಗಿದೆ.
ನಟ ಸಲ್ಮಾನ್ ಖಾನ್ ಬೆನ್ನಿಗೆ ಭೂಗತ ಪಾತಕಿಗಳು ಬಿದ್ದಿದ್ದಾರೆ. ಸಲ್ಮಾನ್ ಖಾನ್ ಅನ್ನು ಕೊಂದೇ ತೀರುವುದಾಗಿ ಲಾರೆನ್ಸ್ ಬಿಷ್ಣೋಯಿ ಮತ್ತು ಅವನ ಸಹಚರರು ಶಪಥ ಮಾಡಿದ್ದಾರೆ. ಈಗಾಗಲೇ ಸಲ್ಮಾನ್ ಖಾನ್ ರ ಆಪ್ತ, ಮಾಜಿ ಶಾಸಕ ಬಾಬಾ ಸಿದ್ಧಿಖಿಯನ್ನು ಬಿಷ್ಣೋಯಿ ಸಹಚರರು ಕೊಲೆ ಮಾಡಿದ್ದಾರೆ.
ಸಲ್ಮಾನ್ ಖಾನ್ಗೆ ಪದೇ ಪದೇ ಜೀವ ಬೆದರಿಕೆ ಬರುತ್ತಲೇ ಇದೆ. ಇದರ ಮಧ್ಯೆಯೂ ಸಲ್ಮಾನ್ ಖಾನ್ ಚಿತ್ರೀಕರಣ ಮಾಡುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಸಲ್ಮಾನ್ ಖಾನ್ ಗ್ಯಾಲೆಕ್ಸಿ ನಿವಾಸದ ಮೇಲೆ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಇಂತಹ ದಾಳಿಗಳು ನಡೆಯಬಾರದು ಎಂಬ ಕಾರಣಕ್ಕೆ ಸಲ್ಮಾನ್ ಖಾನ್ ರ ನಿವಾಸಕ್ಕೆ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಲಾಗಿದೆ.
ರಸ್ತೆ ಬದಿ ಇರುವ ಹಾಗೂ ಇತರೆ ಅಪಾರ್ಟ್ಮೆಂಟ್ ಗಳಿಗೆ ಹೊರಗಿನಿಂದ ಕಾಣುವ ಕಿಟಿಕಿಗಳಿಗೆ ಈ ಗುಂಡು ನಿರೋಧಕ ಗಾಜುಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಮನೆಯ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
ಸಲ್ಮಾನ್ ಖಾನ್ ಬುಲೆಟ್ ಪ್ರೂಫ್ ಕಾರನ್ನು ಬಳಸುತ್ತಿದ್ದಾರೆ. ಜೊತೆಗೆ ತಮ್ಮ ಎಲ್ಲ ಕಾರುಗಳಿಗೂ ಬುಲೆಟ್ ಪ್ರೂಫ್ ಗಾಜುಗಳನ್ನು ಅಳವಡಿಸಿದ್ದಾರೆ. ಪರವಾನಗಿ ಬಂದೂಕುಗಳನ್ನು ಸಹ ಪಡೆದುಕೊಂಡಿದ್ದಾರೆ. ಇನ್ನೊಂದೆಡೆ ಮಹಾರಾಷ್ಟ್ರ ಸರ್ಕಾರ ಕೂಡ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ ಕಲ್ಪಿಸಿದೆ