ಬೆಂಗಳೂರು : ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹೊಸ ಯೋಜನೆಯೊಂದನ್ನು ರೂಪಿಸಿದೆ. ಈ ಬಾರಿ ನೇರವಾಗಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಅತಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಲು ಇಲಾಖೆ ತಯಾರಿ ನಡೆಸಿದೆ.
ಪ್ರತಿ ತಾಲೂಕು ಹಾಗೂ ಪ್ರತಿ ಜಿಲ್ಲೆಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ 3 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿ ಲ್ಯಾಪ್‌ಟಾಪ್ ಖರೀದಿಗೆ ಬೇಕಾದ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವ ಸಾಧ್ಯತೆ ಇದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಈಗಾಗಲೇ ಶಿಕ್ಷಣ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಹಿಂದೆ ಫಲಿತಾಂಶ ಸುಧಾರಿಸುವ ಉದ್ದೇಶದಿಂದ ಪ್ರೌಢಶಾಲಾ ಶಿಕ್ಷಕರಿಗೆ ಬಂಪರ್ ಆಫರ್ ನೀಡಲಾಗಿತ್ತು. ಉತ್ತಮ ಫಲಿತಾಂಶ ತಂದುಕೊಡುವ ಶಿಕ್ಷಕರಿಗೆ ಹೆಚ್ಚುವರಿ 1000ರೂ. ಪ್ರೋತ್ಸಾಹಧನ ನೀಡುವ ಯೋಜನೆ ಜಾರಿಗೆ ತಂದಿತ್ತು.
ಇದೀಗ ಅದೇ ಸಾಲಿನಲ್ಲಿ ವಿದ್ಯಾರ್ಥಿಗಳನ್ನೂ ಪ್ರೋತ್ಸಾಹಿಸಲು ಮುಂದಾಗಿರುವ ಇಲಾಖೆ, ಲ್ಯಾಪ್‌ಟಾಪ್ ನೀಡುವ ಮೂಲಕ ಓದಿನಲ್ಲಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸಲು ಉದ್ದೇಶಿಸಿದೆ.
ಈ ಹೊಸ ಯೋಜನೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ದೊಡ್ಡ ಉತ್ತೇಜನ ನೀಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ಮತ್ತೊಂದು ಫ್ಲೈಓವರ್ ಡೆಮಾಲಿಷ್‌ಗೆ ಸಿದ್ಧತೆ



















