ಭಾರತೀಯ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಆಸ್ಟ್ರೇಲಿಯಾ ನಾಡಿನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಬುಮ್ರಾ ಅವರು ಕಪಿಲ್ ದೇವ್ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆ ಮುರಿಯುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಭಾರತದ ನೆಲದಲ್ಲಿ ಯಶಸ್ವಿ ಬೌಲರ್ ಆಗಿ ಹೊರ ಹೊಮ್ಮಿದ್ದಾರೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಜಸ್ ಪ್ರೀತ್ ಬುಮ್ರಾ 6 ವಿಕೆಟ್ ಕಬಳಿಸಿದ್ದರು. ದ್ವಿತೀಯ ಇನ್ನಿಂಗ್ಸ್ ನಲ್ಲಿ 3 ಉರುಳಿಸಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಟೆಸ್ಟನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿತ್ತು. 11 ಟೆಸ್ಟ್ ಪಂದ್ಯಗಳನ್ನಾಡಿ 51 ವಿಕೆಟ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದರು. ಸದ್ಯ ಈ ಮೈಲಿಗಲ್ಲನ್ನು ಬುಮ್ರಾ ದಾಟಿದ್ದಾರೆ.
ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾದಲ್ಲಿ ಇಲ್ಲಿಯವರೆಗೆ 10 ಟೆಸ್ಟ್ ಪಂದ್ಯಗಳನ್ನಾಡಿ 53 ವಿಕೆಟ್ ಉರುಳಿಸಿದ್ದಾರೆ. ಅಲ್ಲದೇ, ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಕಬಳಿಸಿ ವಿದೇಶಿ ಟೆಸ್ಟ್ ನಲ್ಲಿ ಭಾರತ ತಂಡದ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನೂ ಬರೆದಿದ್ದರು. ಮಾಜಿ ನಾಯಕ ಕಪಿಲ್ ದೇವ್ (10 ಬಾರಿ), ಬುಮ್ರಾ 11 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.