ಮನೆಯ ಬಾಗಿಲು ಮುರಿದು ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಚಾಮರಾಜನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಒಳ ನುಗ್ಗಿದ ಖದೀಮರು 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಂಜುಳಾ ಎಂಬುವರು ಬಾಡಿಗೆಗಿದ್ದ ಮನೆಯಲ್ಲಿ ಕಳ್ಳತನ ನಡೆದಿದೆ ಎನ್ನಲಾಗಿದೆ. ಮನೆಯವರು ಬೀಗ ಹಾಕಿ ಹೊರ ಹೋಗಿದ್ದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ. ಇಂದು ಮಂಜುಳಾ ಮನೆಗೆ ಮರಳಿ ಬಂದಾಗ ಈ ಕಳ್ಳತನ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅಡಿಷನಲ್ ಎಸ್ಪಿ ಶಶಿಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.