ಮಂಡ್ಯ: ಬಸ್ ವೊಂದು ಕಂಟೇನರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಡೆದಿದೆ.
ಮಂಡ್ಯದ (Mandya) ಸಾಂಜೋ ಆಸ್ಪತ್ರೆ ಹತ್ತಿರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysore National Highway) ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 20ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಅಲ್ಲದೇ, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಸಾರಿಗೆ (KSRTC) ಬಸ್ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವಾಗ ಕಂಟೇನರ್ ಗೆ ಡಿಕ್ಕಿ ಹೊಡೆದಿದೆ.
ಆಗ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.