ಜೈಸಲ್ಮೇರ್ : ರಾಜಸ್ಥಾನದ ಜೈಸಲ್ಮೇರ್‌ನ ಥೈಯತ್ ಪ್ರದೇಶದ ಮಿಲಿಟರಿ ಠಾಣೆ ಬಳಿ ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಭೀಕರ ಬೆಂಕಿ ಅವಘಡದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇಂದು ಮಧ್ಯಾಹ್ನ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲಿ ಬಸ್ ಧಗಧಗನೆ ಹೊತ್ತಿ ಉರಿಯುತ್ತಿದ್ದು, ದಟ್ಟ ಹೊಗೆ ಬರುತ್ತಿರುವುದನ್ನು ನೋಡಬಹುದು.
ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದಾನೆ. ಪ್ರಾಥಮಿಕ ವರದಿಗಳ ಪ್ರಕಾರ 10-12 ಪ್ರಯಾಣಿಕರು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಹಲವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.