ಮಂಡ್ಯ | KSRTC ಬಸ್ ಡ್ರೈವರ್ ಒಬ್ಬ ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಲೇ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಡ್ರೈವರ್ ಮೊಬೈಲ್ ನೋಡುತ್ತಾ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರ್ಕಾರಿ ಬಸ್ ಚಾಲಕನ ನಿರ್ಲಕ್ಷ್ಯತನಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಮಳವಳ್ಳಿಯಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ನ ಚಾಲಕ ಮಹೇಶ್ ಎಂಬಾತ ರೀಲ್ಸ್ ನೋಡಿಕೊಂಡು ಬಸ್ ಚಲಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಈ ಮೂಲಕ ಪ್ರಯಾಣಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ.
ಈಗಾಗಲೇ ಮಳವಳ್ಳಿ ಮತ್ತು ಮೈಸೂರು ರಸ್ತೆಯಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿ ಸಾವು-ನೋವಿಗೆ ಕಾರಣವಾಗಿದೆ. ಪರಿಸ್ಥಿತಿ ಹೀಗಿರುವಾಗಲೇ ಡ್ರೈವರ್ ಮಹೇಶ್ ರೀಲ್ಸ್ ನೋಡಿಕೊಂಡು ಬೇಜವಾಬ್ದಾರಿತನದಿಂದ ಬಸ್ ಚಲಿಸುತ್ತಿರುವುದು ಕಂಡು ಬಂದಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಡ್ರೈವರ್‌ನ ಮಹೇಶನ ನಿರ್ಲಕ್ಷ್ಯತನಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ ; ಶಿವಮೊಗ್ಗ | ಮನೆಯನ್ನೇ ಬಂದೂಕು ಫ್ಯಾಕ್ಟರಿ ಮಾಡಿಕೊಂಡಿದ್ದ ವ್ಯಕ್ತಿಯ ಬಂಧನ!



















