ನೇಕಲ್: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಖಾಸಗಿ ಬಸ್ ಹಳ್ಳಕ್ಕೆ ಬಿದ್ದು 42 ಜನ ಭಕ್ತಾಧಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ತಮಿಳುನಾಡಿನ (Tamilnadu) ಕೃಷ್ಣಗಿರಿ (Krishnagiri) ಜಿಲ್ಲೆಯಲ್ಲಿ ನಡೆದಿದೆ. ಬಸ್ ಧರ್ಮಪುರಿ ಸಮೀಪದ ಇಟ್ಟಿಯಂಪಟ್ಟೆ ಗ್ರಾಮದಿಂದ ಓಂ ಶಕ್ತಿ ದೇವಸ್ಥಾನಕ್ಕೆ ತೆರಳುತ್ತಿತ್ತು. ಈ ವೇಳೆ ಕೃಷ್ಣಗಿರಿ ಜಿಲ್ಲೆಯ ಉತಂಗರೈ ಚೆನ್ನಮಲೈ ಶಾಲೆ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ. ಬಿದ್ದ ಪರಿಣಾಮ ದೇವಸ್ಥಾನಕ್ಕೆ ತೆರಳುತ್ತಿದ್ದ 42 ಭಕ್ತಾದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಸ್ಥಳೀಯರು ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂತುರು ಮಳೆಯಿಂದಾಗಿ ಖಾಸಗಿ ಬಸ್ ಅಪಘಾತಕ್ಕೀಡಾಗಿದ್ದು, ಅಪಘಾತದ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ